
ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಮೃತ ಯುವಕ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್ ಶನಿವಾರ ಬೆಳಿಗ್ಗೆ ಬೈಕಿನಲ್ಲಿ ತ್ರಾಸಿಯಿಂದ ಸೌಕೂರು ಕಡೆಗೆ ತೆರಳುತ್ತಿದ್ದ ಸಂದರ್ಭ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಖಾಸಗಿ ಬಸ್‌ಗೆ ಮುಖಾಮುಖಿ ಢಿಕ್ಕಿ ಹೊಡೆದಿದ್ದಾನೆ.
ಢಿಕ್ಕಿಯ ತೀವ್ರತೆಗೆ ವಿಜಯ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇತ್ತೀಚೆಗೆ ಇದೇ ಶೆಟ್ರಕಟ್ಟೆ ಪ್ರದೇಶದಲ್ಲಿ ಟಿಪ್ಪರ್ ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದ ನೆನಪು ಇನ್ನೂ ಮಸುಕಾಗದ ನಡುವೆಯೇ ಅದೇ ಸ್ಥಳದ ಸಮೀಪ ಮತ್ತೊಂದು ಅಪಘಾತ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ
