February 18, 2026
WhatsApp Image 2026-02-17 at 3.09.35 PM

ಉಡುಪಿ: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ.

 

ಮೃತರನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿ ಅಶೋಕ್ ಆಚಾರ್ಯ (33) ಎಂದು ಗುರುತಿಸಲಾಗಿದೆ.

 

ಅಶೋಕ್ ಆಚಾರ್ಯ ಅವರಿಗೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅಸ್ವಸ್ಥತೆ ಉಂಟಾಗಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.

 

ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರಲ್ಲಿ ಆತಂಕ ಹಾಗೂ ನೋವನ್ನುoಟು ಮಾಡಿದೆ.

About The Author

Leave a Reply

Your email address will not be published. Required fields are marked *

You cannot copy content of this page.