
ಉಡುಪಿ: ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ಇಂದು ರಾತ್ರಿ ಚೂರಿ ಇ*ರಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಿಂದೂ ಯುವಸೇನೆಯ ಮುಖಂಡ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜುಕೊಳ ಅವರು ಇಂದು ಬೀಚ್ ಬಳಿ ಜೋಡಿಯೊಂದರ ಪ್ರೇಮದ ವಿಚಾರವಾಗಿ ರಾಜಿಪಂಚಾಯಿತಿಗೆ ಕರೆದಿದ್ದರು.ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂ**ರಿ ಇ*ರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಕ್ಕೆ ಇ*ರಿದ ಪರಿಣಾಮ ಅಲ್ಲೆ ಕುಸಿದು ಬಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಂದು ಪೊಲೀಸ್ ಮೂಲಗಳು ತಿಳಿಸಿವೆ.
