March 10, 2026
WhatsApp Image 2026-03-10 at 9.25.49 AM

ಮಂಗಳೂರು: ಮಂಗಳೂರಿನ ಬಂದರ್ ಪ್ರದೇಶದ ಮಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ 18 ವರ್ಷ ಸಪನಾ ಎಂಬಾಕೆ ಮಾರ್ಚ್ 6 ರಿಂದ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಆಕೆಯ ತಾಯಿ ಚಮೇಲಿ ದೇವಿ ಎಂಬವರು ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಪನಾ ಅವರು 4 ಅಡಿ 8 ಇಂಚು ಎತ್ತರ, ಸಾಧಾರಣ ಕಪ್ಪು ಮೈಬಣ್ಣ, ಬಿಳಿ ಬಣ್ಣದ ನೆಟ್ ಇರುವ ಚೂಡಿದಾ‌ರ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾಳೆ. ಹಿಂದಿ ಮತ್ತು ಭೋಜ್‌ಪುರಿ ಭಾಷೆ ಮಾತನಾಡುತ್ತಾಳೆ. ಈ ಯುವತಿ ಪತ್ತೆಯಾದಲ್ಲಿ ಪಣಂಬೂರು ಪೊಲೀಸ್‌ ಠಾಣೆಗೆ ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ ಗೆ ಮಾಹಿತಿಯನ್ನು ನೀಡಲು ಕೋರಲಾಗಿದೆ.

ಚಮೇಲಿ ದೇವಿ ಅವರು ತೋಟ ಬೆಂಗ್ರಯ ಬಾಡಿಗೆ ಮನೆಯಲ್ಲಿ 2 ವರ್ಷಗಳಿಂದ ವಾಸಮಾಡಿಕೊಂಡಿದ್ದು, ಅವರ ಪುತ್ರಿ ಸಪನಾ ಸುಮಾರು 6-7 ತಿಂಗಳಿನಿಂದ ಮಂಗಳೂರಿನ ಬಂದರ್ ನಲ್ಲಿರುವ ಮಾರ್ಟ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದಳು. ಪ್ರತಿ ದಿನ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿ ರಾತ್ರಿ 8 ಗಂಟೆಯ ಹೊತ್ತಿಗೆ ಮನೆಗೆ ವಾಪಸಾಗುತ್ತಿದ್ದಳು.

ಮಾರ್ಚ್ 6 ರಂದು ಬೆಳಗ್ಗೆ 9 ಗಂಟೆಗೆ ಎಂದಿನಂತೆ ಮನೆಯಿಂದ ಕೆಲಸಕ್ಕೆಂದು ಬಂದರಿನಲ್ಲಿರುವ ಮಾರ್ಟ್ ಗೆ ಹೋಗಿದ್ದು, ಸಂಜೆ ಕೆಲಸ ಮುಗಿಸಿ ರಾತ್ರಿಯಾದರೂ ಮನೆಗೆ ವಾಪಸಾಗಿಲ್ಲ. ಅಕ್ಕಪಕ್ಕದವರಲ್ಲಿ ವಿಚಾರಿಸಿದ್ದು ಎಲ್ಲಿಯೂ ಪತ್ತೆಯಾಗಿಲ್ಲ. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುತ್ತದೆ ಎಂಬುದಾಗಿ ದೂರಿನಲ್ಲಿ ತಿಳಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.