
ಬೆಳ್ತಂಗಡಿ: ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ 2019 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಉಡುಪಿ ಕಾಪು ನಿವಾಸಿ ಮಣಿಕಂಠ (35) ಎಂಬಾತನನ್ನು ಪೊಲೀಸರು ಉಡುಪಿಯಲ್ಲಿ ದಸ್ತಗಿರಿ ಮಾಡಿದ್ದಾರೆ.
ಆರೋಪಿಯ ಪತ್ತೆಗಾಗಿ ಬೆಳ್ತಂಗಡಿ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು. ಇದೀಗ ವೇಣೂರು ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
