March 26, 2026
WhatsApp Image 2026-03-26 at 8.56.16 AM

ಕಾರ್ಕಳ :2027ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಾರ್ಕಳದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಮೊದಲ ಹಂತದಲ್ಲಿ ₹1.59 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.

ಈ ಕುರಿತು 24-03-2026 ರಂದು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಮಹಾಮಸ್ತಕಾಭಿಷೇಕದ ಸಿದ್ಧತೆಗಾಗಿ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಈ ಅನುದಾನವನ್ನು ರಸ್ತೆ, ಕುಡಿಯುವ ನೀರು, ಒಳಚರಂಡಿ ಮತ್ತು ಸಾರ್ವಜನಿಕ ಸೌಲಭ್ಯಗಳ ಅಭಿವೃದ್ಧಿಗೆ ಬಳಸಲಾಗುತ್ತದೆ. 2026-27ನೇ ಸಾಲಿನಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರದ ಆದೇಶದ ಪ್ರಕಾರ ₹159 ಲಕ್ಷ (₹1.59 ಕೋಟಿ) ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಸ್ಥಳೀಯ ಸಂಸ್ಥೆಗಳ ಮೂಲಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ಕಾಮಗಾರಿಗಳ ಗುಣಮಟ್ಟ ಕಾಪಾಡುವಂತೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶಿಸಲಾಗಿದೆ. ಸಂಬಂಧಿತ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾಮಗಾರಿಗಳನ್ನು ಶೀಘ್ರ ಆರಂಭಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಸರ್ಕಾರ ನಿರ್ದೇಶಿಸಿದೆ. (ಮೂಲ: ಕರ್ನಾಟಕ ಸರ್ಕಾರ ಆದೇಶ (ದಿನಾಂಕ: 24-03-2026)   ಉದಯ ಶೆಟ್ಟಿ ಮುನಿಯಾಲು ರಾಜ್ಯ ಸರ್ಕಾರಕ್ಕೆ ಧನ್ಯವಾದ

ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.   ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಫೆಬ್ರವರಿ 25 ನೇ ತಾರೀಕಿನಂದು ಕಾರ್ಕಳಕ್ಕೆ ಆಗಮಿಸಿದ್ದು ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷಕದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಮಾಜಿ ಮುಖ್ಯಮಂತ್ರಿಗಳಾದ ಡಾ. ಎಮ್. ವೀರಪ್ಪ ಮೊಯಿಲಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರವನ್ನು ನೀಡಿದ್ದರು.   ಈ ಸಂದರ್ಭದಲ್ಲಿ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುದಾನ ನೀಡುವ ಭರವಸೆಯನ್ನು ನೀಡಿದ್ದರು, ಅದರಂತೆ ಕೇವಲ ಒಂದು ತಿಂಗಳ ಅವಧಿಯಲ್ಲಿ ಅಲ್ಪ ಸಂಖ್ಯಾತ ಇಲಾಖೆಯ ಮೂಲಕ 1.59 ಕೋಟಿ ರೂಪಾಯಿಗಳ ಅನುದಾನವನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಿದ್ದಾರೆ. ಕೊಟ್ಟ ಮಾತಿನಂತೆ ಅನುದಾನವನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾರ್ಕಳ ಜನತೆಯ ಪರವಾಗಿ ಉದಯ ಶೆಟ್ಟಿ ಮುನಿಯಾಲು ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.