March 26, 2026
WhatsApp Image 2026-03-26 at 3.25.23 PM

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಹೆಬ್ರಿಯ ಹುತ್ತುರ್ಕೆಯಲ್ಲಿ ಸಂಭವಿಸಿದೆ.

ಹೆಬ್ರಿಯ ಬೆಳಂಜೆಯ ನಿವಾಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾತ್ವಿಕ್ ಮೃತ ವಿದ್ಯಾರ್ಥಿ.

ಕೆಲಸದಲ್ಲಿ ನಿರತರಾಗಿದ್ದಾಗ ಆಯತಪ್ಪಿ ಏಣಿಯಿಂದ ಕೆಳಕ್ಕೆ ಬಿದ್ದಿದ್ದರಿಂದ ಸಾತ್ವಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಾತ್ವಿಕ್ ಇತ್ತೀಚೆಗಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಗಿಸಿದ್ದರು ಮತ್ತು ಪದವಿ ವ್ಯಾಸಂಗ ಮಾಡುವ ಕನಸುಕಂಡಿದ್ದರು.

ತನ್ನ ಓದಿನ ಖರ್ಚು ಹಾಗೂ ಕುಟುಂಬದ ಆರ್ಥಿಕ ಹೊರೆಗೆ ನೆರವಾಗುವ ಉದ್ದೇಶದಿಂದ, ರಜಾ ದಿನಗಳಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದು, ಕೇವಲ ವಿದ್ಯಾಭ್ಯಾಸದಲ್ಲಿ ಮಾತ್ರ ಅಲ್ಲದೆ, ಕೃಷಿ ಚಟುವಟಿಕೆಗಳಲ್ಲೂ ಆಸಕ್ತಿ ಹೊಂದಿದ್ದ ಇವರು ಕುಟುಂಬದ ಮುಖ್ಯ ಆಧಾರಸ್ತಂಭವಾಗಿದ್ದರು.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.