March 27, 2026
WhatsApp Image 2026-03-27 at 11.44.03 AM

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ದೇಶದ ಜನರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದ್ದು, ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದೆ. ಪೆಟ್ರೋಲ್‌ ಮೇಲಿನ ಸುಂಕ 13 ರೂ. ನಿಂದ 3 ರೂಪಾಯಿಗೆ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನ 10 ರೂ. ನಿಂದ ಶೂನ್ಯಕ್ಕೆ ಇಳಿಕೆ ಮಾಡಿದೆ.

ಅಮೆರಿಕ ಮತ್ತು ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನಿಂದ ಭಾರತೀಯ ತೈಲ ಕಂಪನಿಗಳು ಎದುರಿಸುತ್ತಿರುವ ನಷ್ಟವನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಆದರೆ ಇದರಿಂದ ಗ್ರಾಹಕರಿಗೆ ಯಾವುದೇ ಉಳಿತಾಯವಾಗುವ ಸಾಧ್ಯತೆಯಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಭಾರತಕ್ಕೆ ಮುಕ್ತಗೊಳಿಸಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಹಾರ್ಮುಜ್‌ ಬಿಕ್ಕಟ್ಟಿನಿಂದ ಪ್ರತಿ ಬ್ಯಾರಲ್‌ ಕಚ್ಚಾ ತೈಲ 100 ಡಾಲರ್‌ಗಳ ಗಡಿ ದಾಟಿದ್ದರಿಂದ ತೈಲ ಕಂಪನಿಗಳು ಪ್ರತಿ ಲೀಟರ್‌ಗೆ 48.8 ರೂ. ನಷ್ಟ ಅನುಭವಿಸುತ್ತಿವೆ. ಕೇಂದ್ರ ಸರ್ಕಾರದ ಕ್ರಮವು ಕಂಪನಿಗಳಿಗೆ ನಷ್ಟ ಸರಿದೂಗಿಸಲು ನೆರವಾಗಲಿದೆ.

ಕೇಂದ್ರ ಸರ್ಕಾರವು ಈ ಹಿಂದೆ ಮೇ 2022 ರಲ್ಲಿ ಅಬಕಾರಿ ಸುಂಕವನ್ನ ಕಡಿತಗೊಳಿಸಿತ್ತು. ಇದರ ನಂತರ, ಪೆಟ್ರೋಲ್ ಪ್ರತಿ ಲೀಟರ್‌ಗೆ 8 ರೂ. ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 6 ರೂ.ನಷ್ಟು ಅಗ್ಗವಾಗಿತ್ತು. ಆದರೆ ಕೇಂದ್ರ ಸರ್ಕಾರದ ಇಂದಿನ ಕ್ರಮದಿಂದ ಗ್ರಾಹಕರಿಗೆ ಯಾವುದೇ ಲಾಭವಿಲ್ಲ ಎಂದು ಹೇಳಲಾಗ್ತಿದೆ. ನಿನ್ನೆ ಭಾರತದ ಬಳಿ ಪ್ರಸ್ತುತ 60 ದಿನಗಳಿಗೆ ಆಗುವಷ್ಟು ತೈಲ ದಾಸ್ತಾನು ಮತ್ತು 30 ದಿನಗಳಿಗೆ ಆಗುವಷ್ಟು ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

ಇನ್ನು ನಯಾರ ಎನರ್ಜಿ ಖಾಸಗಿ ಸಂಸ್ಥೆಯು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ 5.3 ರೂ. ಮತ್ತು 3 ರೂ.ಗಳಷ್ಟು ಹೆಚ್ಚಿಸಿರುವುದು ಮಾರುಕಟ್ಟೆಯ ಮೇಲೆ ಮತ್ತಷ್ಟು ಪರಿಣಾಮ ಬೀರಿದೆ ಎನ್ನಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.