March 27, 2026
r1

ಮಂಗಳೂರು: ಇಲ್ಲಿನ ಫ್ಲೈ ಓವರ್ ಮೇಲೆ ಇಂದು ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್ ಯಾನೆ ಟ್ಯಾಬ್ಲೆಟ್ ಆರಿಫ್‌ನ ಕೊಲೆಯ ಸಂದರ್ಭದಲ್ಲಿ ದುಷ್ಕರ್ಮಿಗಳು ಬಳಸಿದ್ದ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರಿಫ್‌ನನ್ನು ಬೈಕಿನಿಂದ ಕೆಡವಿ ಕೊಲೆಗೈದ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಆ ಕಾರು ಬಂಟ್ವಾಳದ ಬುಡೋಳಿ ಎಂಬಲ್ಲಿ ಪತ್ತೆಯಾಗಿದೆ.

ಆರಿಫ್ ಹತ್ಯೆಯ ಬಳಿಕ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದೇ ಸಂದರ್ಭದಲ್ಲಿ ಬುಡೋಳಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ವಿಟ್ಲ ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.