
ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದು ಪಾದಚಾರಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ವಿದ್ಯಾಗಿರಿ-ಮೂಡುಬಿದಿರೆ ಗಾಂಧಿನಗರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಗಾಂಧಿನಗರದ ಕರ್ದಬೆಟ್ಟು ನಿವಾಸಿ ಶಂಕರ್ ಆಚಾರ್ಯ ಗಾಯಗೊಂಡವರು. ಅವರು ಶುಕ್ರವಾರ ರಾತ್ರಿ ಮೂಡುಬಿದಿರೆ ಕಡೆಯಿಂದ ಗಾಂಧಿನಗರದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಶೇಖರ್ ಎಂಬವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಹಿಂದಿನಿಂದ ಢಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಶಂಕರ್ ಆಚಾರ್ಯರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
