
ಉಡುಪಿ : ಉಡುಪಿ ಜಿಲ್ಲೆಯ ಕಾಪು ಹಾಗೂ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ (ತಂದೆ: ಕೃಷ್ಣ ಸುವರ್ಣ), ಪಿತ್ರೋಡಿ, ಉದ್ಯಾವರ ಗ್ರಾಮದ ನಿವಾಸಿಯಾಗಿದ್ದು, ಈತನ ವಿರುದ್ಧ 4 ಕೊಲೆ ಯತ್ನ ಹಾಗೂ ಹಲ್ಲೆ ಪ್ರಕರಣಗಳು ದಾಖಲಾಗಿವೆ.
ಅದೇ ರೀತಿ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರೀಫ್ ಸಾಹೇಬ್ (ತಂದೆ: ಶೇಖ್ ಹನೀಫ್), ಮುದರಂಗಡಿ, ಎಲ್ಲೂರು ಗ್ರಾಮದ ನಿವಾಸಿಯಾಗಿದ್ದು, ಈತನ ವಿರುದ್ಧ 5 ಕೊಲೆ ಯತ್ನ, ಹಲ್ಲೆ ಮತ್ತು ಮಾದಕ ದ್ರವ್ಯ ಸೇವನೆ ಪ್ರಕರಣಗಳು ದಾಖಲಾಗಿವೆ. ಜೊತೆಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ.
ಈ ಹಿನ್ನೆಲೆ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ದಿನಾಂಕ 02.04.2026 ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಅನ್ವಯ, ವಿಜೇತನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಆರೀಫ್ ಸಾಹೇಬರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
