ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.ನಿಗೂಢವಾಗಿ ಸಾವನ್ನಪ್ಪಿದವರನ್ನು ಯಶೋಧಾ, ಸುಮನ್ ಗುಪ್ತಾ ಮತ್ತು ನರೇಶ್ ಗುಪ್ತಾ ಎಂದು ಗುರುತಿಸಲಾಗಿದೆ.ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ವೆಸ್ಟ್ ಆಪ್ ಕಾರ್ಡ್ ರಸ್ತೆಯ ಅಪಾರ್ಟ್ ಮೆಂಟ್ ನಲ್ಲಿ ಮೂವರ ಮೃತ ದೇಹ ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.