April 14, 2026
WhatsApp Image 2026-04-14 at 5.24.50 PM
14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ದುರಂತ ಸಂಭವಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರುಣ್ಯ (14) ವರ್ಷದ ಮಗಳನ್ನು ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿದ್ದಾರೆ. ಬಳಿಕ ತಾಯಿ ಸುವರ್ಣ (40) ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ ಸುವರ್ಣ ಅವರ ಅತ್ತೆ ಮಾವ ಮನೆಯಲ್ಲಿ ಇದ್ದರು ಈ ವೇಳೆ ಕೋಣೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಈ ಒಂದು ಘಟನೆಗೆ ಏನು ಕಾರಣ ಎನ್ನುವುದನ್ನು ಪರಿಶೀಲನೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.