April 17, 2026
wmremove-transformed

ಕಾಪು: ಮಂಗಳೂರು – ಉಡುಪಿ ರಾಷ್ಟೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಕಾಪು ಠಾಣಾ ವ್ಯಾಪ್ತಿಯ ಪಾಂಗಳ ಕಟ್ಟಿಕೆರೆ ಎಂಬಲ್ಲಿ ಘಟನೆ ನಡೆದಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಂಗಳೂರಿನಿಂದ ಉಡುಪಿ ಕಡೆಗೆ ಕಾರು ಸಾಗುತ್ತಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.