
ಹುಬ್ಬಳ್ಳಿ : ಆನ್ಲೈನ್ ಗೇಮ್ಗೆ ದಾಸನಾಗಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ಉದಯನಗರದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಸಮರ್ಥ್ (14) ಮೃತಪಟ್ಟ ಬಾಲಕ.
ಉದಯನಗರ ನಿವಾಸಿಯಾದ ಸಮರ್ಥ್ ಕಳೆದ ಕೆಲವು ದಿನಗಳಿಂದ ‘ಫ್ರೀಫೈರ್’ನಂತಹ ಆನ್ಲೈನ್ ಗೇಮ್ಗಳಿಗೆ ವಿಪರೀತವಾಗಿ ಅಡಿಕ್ಟ್ ಆಗಿದ್ದನು. ಗುರುವಾರ ರಾತ್ರಿ ಸತತವಾಗಿ ಗೇಮ್ ಆಡುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿ, ಓದಿನತ್ತ ಗಮನಹರಿಸುವಂತೆ ತಿಳಿಸಿ ಮೊಬೈಲ್ ಕಿತ್ತುಕೊಂಡಿದ್ದರು. ಇದರಿಂದ ನೊಂದ ಬಾಲಕ ತನ್ನ ಕೋಣೆಗೆ ಹೋಗಿ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾನೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
