May 4, 2026
WhatsApp Image 2026-05-02 at 8.59.53 AM

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದ ಬಳಿ ಗುರುವಾರ ಸಂಜೆ ಸಂಭವಿಸಿದ ಸ್ಕಾರ್ಪಿಯೋ ಕಾರು, ಟ್ಯಾಂಕರ್ ಮತ್ತು ಸ್ಕೂಟರ್ ನಡುವಿನ ಸರಣಿ ಅಪಘಾತದಲ್ಲಿ ಸ್ಕೂಟರ್ ಸಹಸವಾರ ಸಾವನಪ್ಪಿದ ಘಟನೆ ನಡೆದಿದೆ.

ಮೃತರನ್ನು ವಿಶ್ವನಾಥ ಕೆ. ಪುತ್ರನ್ ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಸಂತೋಷ್ ಎನ್. ಅಮೀನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೈಪುಂಜಾಲು ನಿವಾಸಿ ಸಂತೋಷ್ ಅಮೀನ್ ಅವರು ತಮ್ಮ ಸ್ನೇಹಿತ ವಿಶ್ವನಾಥ ಅವರೊಂದಿಗೆ ಸ್ಕೂಟರ್‌ನಲ್ಲಿ ಕಾಪುವಿಗೆ ಹೋಗುತ್ತಿದ್ದರು. ಸಂಜೆ 5:30ರ ಸುಮಾರಿಗೆ ಪಾಂಗಾಳದ ಬಳಿ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವಾಗ, ಮಂಗಳೂರಿನಿಂದ ಉಡುಪಿ ಕಡೆಗೆ ಅತಿವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿಶ್ವನಾಥ ಅವರು ರಸ್ತೆಯ ಬಲ ಭಾಗಕ್ಕೆ ಬಿದ್ದಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.