
ಬೆಂಗಳೂರು : ಬೆಸ್ಕಾಂ ಎಸ್ಪಿ ಆಗಿ ವಿಜಿಲೆನ್ಸ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಲಾವಣ್ಯ (39) ಕ್ಯಾನ್ಸರ್ ನಿಂದಾಗಿ ನಿಧನರಾಗಿದ್ದಾರೆ. ಕೊಲೊನ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಪೊಲೀಸ್ ಅಧಿಕಾರಿ ಲಾವಣ್ಯ ಅವರು, ಇಂದು ಮಧ್ಯಾಹ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬೆಸ್ಕಾಂ ವಿಜಿಲೆನ್ಸ್ ನಲ್ಲಿ ಎಸ್ಪಿಯಾಗಿದ್ದ ಲಾವಣ್ಯ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ 2023 ರಿಂದಲೂ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ.
ಮಂಡ್ಯ ಮತ್ತು ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ಬೆಂಗಳೂರಿನಲ್ಲಿ ಇಂಟಲಿಜೆನ್ಸ್ ಮತ್ತು ಡಿಸಿಆರ್‌ಇ ಎಸ್ಪಿ ಆಗಿ ಕೆಲಸ ಮಾಡಿದ್ದಾರೆ. ಇತ್ತೀಚೆಗಷ್ಟೇ ವಿದ್ಯಾರಣ್ಯಪುರದಲ್ಲಿರುವ ನಿವಾಸಕ್ಕೆ ಎರಡು ತಿಂಗಳ ಹಿಂದೆ DG&IGP ಡಾ. ಎಂ.ಎ ಸಲೀಂ ಭೇಟಿ ನೀಡಿ ಧೈರ್ಯ ತುಂಬಿದ್ದರು. ಚೇತರಿಸಿಕೊಳ್ಳುವಂತೆ ಹಾರೈಸಿ ಕುಟುಂಬದವರಿಗೂ ಸಹ ಧೈರ್ಯ ತುಂಬಿ ಬಂದಿದ್ದರು.
