May 31, 2026
WhatsApp Image 2026-05-05 at 10.08.46 AM

ಬಂಟ್ವಾಳ : ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಾಗರ ಆಡಿಟೋರಿಯಂ ಮುಂಭಾಗ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ  ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.ಮೃತರನ್ನು ವಿಶ್ವನಾಥ ರೈ ಎಂದು ಗುರುತಿಸಲಾಗಿದೆ.

ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮಧ್ಯಾಹ್ನ ಸುಮಾರಿಗೆ ಬಿ.ಸಿ.ರೋಡ್ ಕಡೆಯಿಂದ ಮೆಲ್ಕಾರ್ ಕಡೆಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ವಿಶ್ವನಾಥ ರೈ ಅವರನ್ನು ನೋಡಿಯೂ ಕಾರನ್ನು ನಿಧಾನಿಸದೆ ನಿರ್ಲಕ್ಷ್ಯದಿಂದ ಚಲಾಯಿಸಿ ಡಿಕ್ಕಿ ಹೊಡೆದಿದ್ದಾರೆ.

ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ರೈ ಅವರನ್ನು ಬಿ.ಸಿ.ರೋಡ್‌ನ ಸೋಮಯಾಜಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಸಂಜೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

About The Author

Leave a Reply

Your email address will not be published. Required fields are marked *

You cannot copy content of this page.