
ಮಂಗಳೂರು: ನಗರದ ಹೊರವಲಯದ ಕುತ್ತಾರಿನಲ್ಲಿ ನಿಟ್ಟೆ ಪರಿಗಣಿತ ವಿವಿ ನಿರ್ಮಿಸಲು ಉದ್ಧೇಶಿಸಿರುವ ವೃತ್ತಕ್ಕೆ ಕೊರಗಜ್ಜನ ಹೆಸರು ಇಡೋದಕ್ಕೆ ಕೆಲವು ಅಲ್ಪಸಂಖ್ಯಾತ ಗುಂಪುಗಳು ವಿರೋಧ ವ್ಯಕ್ತಪಡಿಸಿದ ಘಟನೆ ನಿನ್ನೆ ರಾತ್ರಿ ಉಳ್ಳಾಲದಲ್ಲಿ ನಡೆದಿದೆ.
ಮಂಗಳೂರು ಶಾಸಕ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಈ ವಿಚಾರವಾಗಿ ಅಲ್ಪಸಂಖ್ಯಾತ ವ್ಯಕ್ತಿಗಳ ಗುಂಪು ಯಾವುದೇ ಕಾರಣಕ್ಕೂ ವೃತ್ತಕ್ಕೆ ಕೊರಗಜ್ಜನ ಹೆಸರು ಇಡಬಾರದು ಎಂದು ಒತ್ತಾಯಿಸಿದೆ.
ಈ ವಿಚಾರವಾಗಿ ಶಾಸಕ ಯು.ಟಿ.ಖಾದರ್ ಮತ್ತು ಗುಂಪಿನ ನಡುವೆ ವಾಗ್ವಾದವೂ ನಡೆದಿದ್ದಿ,ಕೊರಗಜ್ಜನ ಹೆಸರನ್ನು ವೃತ್ತಕ್ಕೆ ಇಟ್ಟಲ್ಲಿ ಮುಂದಾಗುವ ಅನಾಹುತಕ್ಕೆ ಶಾಸಕರೇ ಹೊಣೆಯಾಗುತ್ತಾರೆ ಎನ್ನುವ ಎಚ್ಚರಿಕೆಯನ್ನೂ ಈ ಸಂದರ್ಭದಲ್ಲಿ ನೀಡಲಾಗಿದೆ. ವಾಗ್ವಾಧದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
