May 11, 2026
image (51)

ಶಿವಮೊಗ್ಗ: ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನ ಬಳಿ ರವಿವಾರ ರಾತ್ರಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೇ ಜೋಗ ನಿವಾಸಿ ಶಿವಕುಮಾರ್ (32) ಮೃತಪಟ್ಟ ದುರ್ದೈವಿ. ಶಿವಕುಮಾರ್ ಅವರು ರವಿವಾರ ರಾತ್ರಿ ಸುಮಾರು 9:30ರ ಸುಮಾರಿಗೆ ಶಿವಮೊಗ್ಗದಿಂದ ಹಳೇ ಜೋಗದಲ್ಲಿರುವ ತಮ್ಮ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು.

ಈ ವೇಳೆ ಹೊನ್ನಾಳಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಕೊಮ್ಮನಾಳು ತಿರುವಿನ ಬಳಿ ಶಿವಕುಮಾರ್ ಅವರ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಶಿವಕುಮಾರ್ ಅವರು ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.