May 27, 2026
accident-3

ಉಡುಪಿ: ಮಂಗಳೂರಿನಿಂದ ಮೀನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದರ ಹಿಂಬದಿ ಟೈರ್ ಏಕಾಏಕಿ ಸ್ಫೋಟಗೊಂಡು, ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಮಂಗಳವಾರ ಉಡುಪಿ ಅಂಬಾಗಿಲು ಸಮೀಪ ಸಂಭವಿಸಿದೆ. ಈ ಅಪಘಾತದಲ್ಲಿ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಮೀನಿನ ಲೋಡ್ ಮಾಡಿಕೊಂಡು ಬರುತ್ತಿದ್ದ ಲಾರಿಯು ಅಂಬಾಗಿಲು ಸಮೀಪ ತಲುಪುತ್ತಿದ್ದಂತೆ ಈ ಅಪಘಾತ ಸಂಭವಿಸಿದೆ. ಲಾರಿಯ ಹಿಂಬದಿಯ ಚಕ್ರದ ಟೈರ್ ಅನಿರೀಕ್ಷಿತವಾಗಿ ಭಾರಿ ಸದ್ದಿನೊಂದಿಗೆ ಸ್ಫೋಟಗೊಂಡಿದೆ. ಇದರಿಂದಾಗಿ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ ಸ್ಟೀರಿಂಗ್ ತಿರುಗಿಸಲು ಯತ್ನಿಸಿದರೂ, ಭಾರೀ ತೂಕದ ಲಾರಿಯು ರಸ್ತೆ ಬದಿಗೆ ಉರುಳಿ ಬಿದ್ದಿದೆ.

ಅಪಘಾತದ ಸಮಯದಲ್ಲಿ ಲಾರಿಯಲ್ಲಿ ಚಾಲಕ ಒಬ್ಬರೇ ಇದ್ದರು ಎನ್ನಲಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ವಾಹನಕ್ಕೆ ಸಾಕಷ್ಟು ಹಾನಿಯಾಗಿದೆಯಾದರೂ, ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿ, ಚಾಲಕನನ್ನು ಲಾರಿಯಿಂದ ಹೊರಗೆ ಕರೆತಂದಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಮೂಲಕ ವಾಹನ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಲಾರಿ ಉರುಳಿ ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

 

 

About The Author

Leave a Reply

Your email address will not be published. Required fields are marked *

You cannot copy content of this page.