May 27, 2026
image (17)

ಬಂಟ್ವಾಳ: ಅಪರಿಚಿತ ವಾಹನವೊಂದು ಢಿಕ್ಕಿಯಾಗಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿ, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಕಡೆಗೋಳಿ ಎಂಬಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.

ಬಜಪೆ ಕೈಕಂಬ ನಿವಾಸಿ ಅಭಿಜಿತ್ (28) ಮೃತಪಟ್ಟ ದುರ್ದೈವಿ. ಬಸ್ ಕ್ಲೀನರ್ ಸಂದೀಪ್ ಗಂಭೀರವಾಗಿ ಗಾಯಗೊಂಡ ಸಹ ಸವಾರ.

ಅಭಿಜಿತ್ ಅವರು ಸ್ನೇಹಿತ ಸಂದೀಪ್ ಅವರನ್ನು ಬೈಕಿನಲ್ಲಿ ಬಂಟ್ವಾಳದ ಅಮ್ಟಾಡಿಯ ಮನೆಗೆ ಬಿಟ್ಟು ಬರಲು ಹೋಗುತ್ತಿದ್ದರು. ಈ ವೇಳೆ ಮುಂಜಾನೆ 3 ಗಂಟೆ ಸುಮಾರಿಗೆ ಫರಂಗಿಪೇಟೆ ಸಮೀಪದ ಕಡೆಗೋಳಿ ಎಂಬಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಹೇಳಲಾಗಿದೆ.

ಢಿಕ್ಕಿಯ ರಭಸಕ್ಕೆ ಬೈಕ್ ಪಲ್ಟಿಯಾಗಿದ್ದು ಅಭಿಜಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸಹಸವಾರ ಸಂದೀಪ್ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಭಿಜಿತ್ ಗೆ ಮಂಗಳೂರಿನ ಎಂ.ಆರ್.ಪಿ.ಎಲ್. ಸಂಸ್ಥೆಯಲ್ಲಿ ಉದ್ಯೋಗ ದೊರಕಿದ್ದು, ಮೇ 27 ರಂದು ಕೆಲಸಕ್ಕೆ ಹಾಜರಾಗಬೇಕಿತ್ತು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.