BREAKING NEWS : ಹಾವೇರಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ : ಹಾವೇರಿಯಲ್ಲಿ ಘೋರದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಭಾರತಿ ಕಮದೊಳ್ಳಿ (40) ಮಗ ಕಿರಣ್ (21) ಹಾಗೂ ಸೊಸೆ ಸೌಜನ್ಯ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 3 ತಿಂಗಳ ಹಿಂದೆ ಕಿರಣ್, ಸೌಜನ್ಯ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.