ಮಂಗಳೂರು : ಯಕ್ಷಗಾನ ನಡೆಯುತ್ತಿದ್ದಾಗ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ಮೃತಪಟ್ಟ ಘಟನೆ ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ನಡೆದಿದೆ.
ಮೃತರನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು (58) ಎಂದು ಗುರುತಿಸಲಾಗಿದೆ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ಯಕ್ಷಗಾನ ನಡೆಯುತ್ತಿತ್ತು. ರಂಗಸ್ಥಳದಲ್ಲೇ ಗುರುವಪ್ಪ ಬಾಯಾರು ಅವರಿಗೆ ಹೃದಯಾಘಾತವಾಗಿ ರಂಗಸ್ಥಳದಿಂದ ಕೆಳಗೆ ಕುಸಿದು ಬಿದ್ದಿದ್ದಾರೆ. ಕೂಡಲೇ ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಅಸ್ಪತ್ರೆಗೆ ದಾಖಲು ಮಾಡಲಾಗಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.