ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ, ವಿಶ್ವ ಹಿಂದೂ ಪರಿಷತ್!

ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು  ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ.

ತಮ್ಮ ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡು ಬಂದರೆ ಅಥವಾ ಲವ್ ಜಿಹಾದ್‌ ಗೆ ಬಲಿಯಾದ್ರೆ ತುರ್ತಾಗಿ ಸಂಪರ್ಕಿಸಲು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಜೊತೆಗೆ ಇಮೇಲ್ ಐಡಿಯನ್ನು ನೀಡಲಾಗಿದೆ‌. ಕರೆ ಮಾಡಿದವರ ಮಾಹಿತಿಗಳನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಸಂಘಟನೆಗಳ ಪ್ರಮುಖರು ಹೇಳಿದ್ದಾರೆ. ಲವ್ ಜಿಹಾದ್ ಪ್ರಕರಣ ಕಂಡುಬಂದಲ್ಲಿ ಹೆಲ್ಪ್ ಲೈನ್ ನಂಬರ್‌ ಗೆ ಸಂಪರ್ಕಿಸಲು ತಿಳಿಸಲಾಗಿದೆ.

ಪೋಷಕರು ಲವ್ ಜಿಹಾದ್ ಬಗ್ಗೆ ಎಚ್ಚರ ವಹಿಸಿ, ಮಕ್ಕಳ ಬಗ್ಗೆ ಸಂಶಯವಿದ್ದಲ್ಲಿ ಸಂಕೋಚ ಪಡದೆ ಸಂಪರ್ಕಿಸಬಹುದು. ಅಗತ್ಯವಿದ್ದಲ್ಲಿ ಕಾನೂನಿನ ಸಲಹೆಗಳನ್ನು ನೀಡಲಾಗುತ್ತದೆ. ಲವ್ ಜಿಹಾದ್ ಮುಕ್ತವನ್ನಾಗಿ ಮಾಡುವುದೇ ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಹಾಗೆಯೇ “ಲವ್‌ ಜಿಹಾದ್‌ ಮುಕ್ತ ಹಿಂದೂ ಸಮಾಜ ನಮ್ಮ ಗುರಿ” ಎನ್ನುವ ಟ್ಯಾಗ್ ಲೈನ್‌ ನ ಪೋಸ್ಟರ್ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ನಮ್ಮ ಹಿಂದೂ ಸಹೋದರರು ತಮ್ಮ ಮನೆಗಳಲ್ಲಿ, ನೆರೆಹೊರೆಗಳಲ್ಲಿ ಅಥವಾ ಹಳ್ಳಿಗಳಲ್ಲಿ ಯಾವುದೇ ‘ಲವ್ ಜಿಹಾದ್’ ಪ್ರಕರಣಗಳನ್ನು ಕಂಡಲ್ಲಿ ಸಹಾಯವಾಣಿ ಸಂಖ್ಯೆ 9148658108 ಅಥವಾ 9591658108 ವಾಟ್ಸಾಪ್ ಅನ್ನು ಸಂಪರ್ಕಿಸಲು ನಾವು ಒತ್ತಾಯಿಸುತ್ತೇವೆ ಎಂದು ಸಂಘಟನೆಯ ಪ್ರಮುಖರು ಹೇಳಿಕೆ ನೀಡಿದ್ದಾರೆ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.