ಉಡುಪಿ: ಜನವರಿ 4 ರಂದು ಸರಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಲಸಿಕಾ ಮೇಳ

ಉಡುಪಿ: ಚೀನಾ, ಕೊರಿಯಾ, ಜಪಾನ್, ಯುಎಸ್ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 4ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.

ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನ ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಮತ್ತು ಲಸಿಕೆ ನಿಗದಿಪಡಿಸಿಕೊಂಡು ಲಸಿಕೆ ಪಡೆಯುವಂತೆ ತಿಳಿಸಲಾಗಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆ ಲಭ್ಯವಿಲ್ಲ. ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Check Also

ಉಡುಪಿ: ಪರ್ಕಳದ ಕೆರೆದಂಡೆ ನಾಲ್ಕನೇ ಬಾರಿ ಕುಸಿತ, ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಪರ್ಕಳ: ಇಲ್ಲಿನ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರುಗಡೆ ನಿರ್ಮಾಣವಾಗುತ್ತಿರುವ ಕೆರೆ ಈ ಬಾರಿಯೂ ಸಾಧಾರಣ ಮಳೆಗೇ ಕುಸಿದಿದೆ. ಸ್ಥಳಕ್ಕೆ ಉಡುಪಿ …

Leave a Reply

Your email address will not be published. Required fields are marked *

You cannot copy content of this page.