ಹಸುವಿನ ಕರು ಮೇಲೆಯೇ ಅತ್ಯಾಚಾರ : ಕಾಮುಕ ಶಫೀ ಉಲ್ಲಾ ಪೊಲೀಸ್ ವಶಕ್ಕೆ..!

ಕೋಲಾರ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕ ತೃಷೆ ತೀರಿಸಿಕೊಳ್ಳಲು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಕಾಮುಕನೊಬ್ಬ ಹಸುವಿನ ಕರು ಮೇಲೆ ಕೀಚಕತನ ಮೆರೆದಿರುವ ವಿಲಕ್ಷಣ ಘಟನೆ ಕೋಲಾರದ ಜಿಲ್ಲೆಯಲ್ಲಿ ನಡೆದಿದೆ.

ರಾಮರೆಡ್ಡಿ ಎಂಬುವವರಿಗೆ ಸೇರಿದ ಹಸುವಿನ ಕರು ಮೇಲೆ ಶಫೀ ಉಲ್ಲಾ ಎನ್ನುವ ಕಾಮುಕ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಗ್ರಾಮದಲ್ಲಿ ನಡೆದಿದೆ. ಈ ಹಿಂದೆ ಹಸುವಿನ ಮೇಲೆ ಅತ್ಯಾಚಾರ ಎಸಗಿ ಷಫೀ ಉಲ್ಲಾ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಆ ವೇಳೆ ಗ್ರಾಮಸ್ಥರೇ ಬೈದು ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದ್ರೆ, ಕಾಮುಕ ಶಫೀ ಉಲ್ಲಾ ಮತ್ತೆ ತಮ್ಮ ಹಳೇ ಚಾಳಿ ಮುಂದುವರೆಸಿದ್ದಾನೆ. ಇದರಿಂದ ಗ್ರಾಮಸ್ಥರು ಈ ಬಾರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೇತಮಂಗಲ ಪೊಲೀಸರು ಶಫೀ ಉಲ್ಲಾನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ದಂಡ ಬಳಸಿ ಶಫೀ ಉಲ್ಲಾನ ಕಾಮ ಇಳಿಸಿದ್ದಾರೆ..

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.