ಬಂಟ್ವಾಳ: ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಬೆಳ್ತಂಗಡಿ ಮೂಲದ ವಿಜಿತ್ ಮೃತಪಟ್ಟ ಯುವಕ.ಬಂಟ್ವಾದಲ್ಲಿ ನಡೆಯುವ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದೆ ಎನ್ನಲಾಗಿದೆ.ಇನ್ನು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.