ಕೊಚ್ಚಿ: ಕೇರಳದಲ್ಲಿ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ 60 ದಿನಗಳ ಹೆರಿಗೆ ರಜೆ ನೀಡಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಘೋಷಿಸಿದ್ದಾರೆ. ಈಗ ಋತುಸ್ರಾವ ರಜೆ ಸೇರಿದಂತೆ ವಿದ್ಯಾರ್ಥಿನಿಯರ ಹಾಜರಾತಿ ಶೇ.73ರಷ್ಟಿ ಇರಬೇಕು .
ಅದು ಈ ಹಿಂದೆ ಶೇ.75ರಷ್ಟಿತ್ತು.
ಕೊಚ್ಚಿನ್ ಯುನಿವರ್ಸಿಟಿ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ (ಕುಸಾಟ್) ಅನ್ನು ಅನುಸರಿಸಿ ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಮುಟ್ಟಿನ ರಜೆಗಳನ್ನು ನೀಡಲು ಪರಿಗಣಿಸಲಾಗುತ್ತಿದೆ ಎಂದು ಕೇರಳ ಸರ್ಕಾರ ಈ ಹಿಂದೆ ಘೋಷಿಸಿತ್ತು.
ಕುಸಾಟ್ ಶನಿವಾರ (ಜನವರಿ 14) ತನ್ನ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆಗಳನ್ನು ನೀಡುವುದಾಗಿ ಘೋಷಿಸಿದೆ. ‘ಮುಟ್ಟಿನ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುತ್ತಿರುವ ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಪರಿಗಣಿಸಿ, ಕೇರಳ ಸರ್ಕಾರವು ಇದನ್ನು ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಿಗೆ ವಿಸ್ತರಿಸಲು ಯೋಜಿಸುತ್ತಿದೆ’ ಎಂದು ಬಿಂದು ತಮ್ಮ ಕಚೇರಿಯಿಂದ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.