ಚಿಕ್ಕಮಗಳೂರು: ದತ್ತಪೀಠ ಮತ್ತು ದತ್ತಮಾಲೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಕ್ಷಮೆಯಾಚಿಸಿದ್ದಾರೆ.
ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳಿರುವ ಟಿ.ಡಿ ರಾಜೇಗೌಡ ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ.ಹಳ್ಳಿಗಳಲ್ಲಿ ರೂಡಿಯಿರುವ ಶಬ್ದವನ್ನು ಬಳಸಿದ್ದೇನೆ.
ಆ ಶಬ್ದ ಬಳಕೆ ಯಾರ ಸಂಸ್ಕೃತಿಯೂ ಆಗಬಾರದು. ಆ ಶಬ್ದ ಬಳಸಬಾರದಿತ್ತು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕ್ಷಮೆಯಾಚಿಸಿದ್ದಾರೆ.ಅಭಿವೃದ್ಧಿ ಕೆಲಸಕ್ಕೆ ಅಡ್ಡಿ ಮಾಡುತ್ತಿದ್ದಾರೆ ಆದ್ದರಿಂದ ಆಕ್ರೋಶವಾಗಿ ಮಾತನಾಡಿದೆ. ದತ್ತಮಾಲೆ ಹಾಕಲಿಲ್ಲ ಎಂದು ದಲಿತ ವಿದ್ಯಾರ್ಥಿಗೆ ಹಲ್ಲೆ ಮಾಡಿದರು. ಹಲ್ಲೆ ವಿಷಯವಾಗಿ ಬುದ್ದಿಹೇಳುವ ಕೆಲಸವನ್ನು ಮಾಡಿದ್ದೇನೆ.
ಇನ್ನು ಶಾಸಕ ಟಿ.ಡಿ.ರಾಜೇಗೌಡ ಅವರ ಮಾತಿಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅದಲ್ಲದೆ 24 ಗಂಟೆಯೊಳಗೆ ಕ್ಷಮೆ ಕೇಳಬೇಕು ಇಲ್ಲವಾದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕರೆ ನೀಡಿದ್ದವು. ಹೀಗಾಗಿ ಕೊನೆಗೂ ಟಿ.ಡಿ ರಾಜೇಗೌಡ ಕ್ಷಮೆಯಾಚಿಸಿದ್ದಾರೆ.