October 18, 2024
1

ಕಾರ್ಕಳ : ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಕೃಷ್ಣ ಬರೆದಿದೆ ಎನ್ನಲಾದ ಡೆತ್ ನೋಟ್ ಕೂಡ ಸಿಕ್ಕಿದೆ. ಕೃಷ್ಣ ಸಫಲಿಗ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಿನ್ನೆ ರಾತ್ರಿ ತಮ್ಮನ ಮನೆಯಲ್ಲಿ ಮೆಂಹದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ್ದ ನಂತರ ಈ ಘಟನೆ ನಡೆದಿದ್ದು, ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.