ಬೆಂಗಳೂರು: ಈಗಾಗಲೇ ನಂದಿನಿ ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರವನ್ನು ಕೆಎಂಎಫ್ ನಿಂದ ಹೆಚ್ಚಳ ಮಾಡಲಾಗಿತ್ತು. ಈಗ ನಂದಿನಿ ಜಂಬೂ ಹಾಲಿನ ದರವನ್ನು 3 ರೂ ಹೆಚ್ಚಳ ಮಾಡಿ ಆದೇಶಿಸಿದೆ.
ಈ ದರ ನಾಳೆಯಿಂದಲೇ ಜಾರಿಗೆ ಬರಲಿದೆ ಎಂಬುದಾಗಿ ಹೇಳಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಕೆಎಂಎಫ್, ಜಂಬೂ ಪ್ಯಾಕೇಟ್ ಹಾಲಿನದ ದರವನ್ನು 3 ರೂ ಹೆಚ್ಚಳ ಮಾಡಲಾಗುತ್ತಿದೆ. ದರ ಹೆಚ್ಚಳದ ಹಿನ್ನಲೆಯಲ್ಲಿ ನಂದಿನಿ ಜಂಬೂ ಪ್ಯಾಕೇಟ್ ಹಾಲಿನ ದರಗಳು ನಾಳೆಯಿಂದ 231ರಿಂದ 234 ರೂಗೆ ಏರಿಕೆಯಾಗಲಿವೆ ಎಂದು ಹೇಳಿದೆ.
ಅಂದಹಾಗೇ ನಂದಿನಿ ಜಂಬೂ ಪ್ಯಾಕೇಟ್ ಹಾಲು 6 ಲೀಟರ್ ಸಾಮರ್ಥ್ಯದ್ದಾಗಿದೆ. ಈ ದರವನ್ನು ನಾಳೆಯಿಂದ ಜಾರಿಗೆ ಬರುವಂತೆ 3 ರೂ ಹೆಚ್ಚಿಸಿದ ಪರಿಣಾಮ 234 ರೂ ಆಗಲಿದೆ.