ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಧರೆಗೆ ಢಿಕ್ಕಿ-ಯುವತಿಗೆ ಗಂಭೀರ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಧರೆಗೆ ಢಿಕ್ಕಿಯಾದ ಪರಿಣಾಮ ಓರ್ವ ಪ್ರಯಾಣಿಕ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ.

ವಿಟ್ಲದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸೆಲಿನಾ ಬಸ್ ಅಪಘಾತದ ವೇಳೆ ಬಸ್ ನ ಮುಂಭಾಗದ ಗಾಜು ಒಡೆದು ಯುವತಿ ಹೊರಕ್ಕೆ ಎಸೆಯಲ್ಪಟ್ಟಿದ್ದಾಳೆ.ಯುವತಿಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಉಳಿದಂತೆ ಅನೇಕ ಪ್ರಯಾಣಿಕರಿಗೂ ಗಾಯವಾಗಿದೆ.

ಜಾಯಿಂಟ್ ವೀಲ್ ಕಡಿತಗೊಂಡು ಅಪಘಾತ ಸಂಭವಿಸಿದೆ ಎಂದು ಚಾಲಕ ಹೇಳುತ್ತಿದ್ದಾನೆ.ಆದರೆ ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

Check Also

ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂತರ …

Leave a Reply

Your email address will not be published. Required fields are marked *

You cannot copy content of this page.