ಬೆಂಗಳೂರು: ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಆರೋಪಿ ಮದುವೆಯಾಗಿದ್ದು, ದಂಪತಿಗೆ ಮಗುವಾದ ಹಿನ್ನೆಲೆಯಲ್ಲಿ ಆರೋಪಿ ಮೇಲಿನ ಪೋಕ್ಸೊ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಮಂಡ್ಯದ ಅರಕೆರೆಯ 27 ವರ್ಷದ ಯುವಕ ತನ್ನ ವಿರುದ್ಧ ಕ್ರಿಮಿನಲ್ ಪ್ರಕರಣ ರದ್ದು ಮಾಡಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ.
ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಪೋಕ್ಸೊ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.
ಸಂತ್ರಸ್ತೆ ಈಗಾಗಲೇ ವಯಸ್ಕಳಾಗಿದ್ದು, ಸ್ವಂತ ನಿರ್ಧಾರ ಕೈಗೊಳ್ಳಲು ಮತ್ತು ಜೀವನದ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ. ಆರೋಪಿಯನ್ನೇ ಆಕೆ ಮದುವೆಯಾಗಿ ಮಗು ಪಡೆದಿದ್ದಾಳೆ. ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಆಕೆಯ ಸಮ್ಮತಿ ಇದೆ. ಸಂತ್ರಸ್ತೆ ಮತ್ತು ಮಗುವಿನ ಭವಿಷ್ಯದ ದೃಷ್ಟಿಯಿಂದ ಅರ್ಜಿದಾರನ ಮೇಲಿನ ಪೋಕ್ಸೊ ಪ್ರಕರಣ ರದ್ದುಪಡಿಸುವುದು ಸೂಕ್ತ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು, ಆರೋಪಿ ಮೇಲಿನ ಪೋಕ್ಸೊ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.