April 19, 2026
WhatsApp Image 2023-02-14 at 12.03.14 PM

ಸುರತ್ಕಲ್‌ : 7ನೇ ತರಗತಿ ಕಲಿಯುತ್ತಿರುವ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.

ಸುರತ್ಕಲ್‌ ಸಮೀಪದ ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ಕಾಟಿಪಳ್ಳದ ಹರ್ಷಿತ್‌ (13) ಮೃತ ವಿದ್ಯಾರ್ಥಿ. ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ಶನಿವಾರ ತೆರಳಿದ್ದ ಹರ್ಷಿತ್‌ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅನಿರೀಕ್ಷಿತವಾಗಿ ಯಾವುದೋ ಕಾರಣಕ್ಕೆ ಮನನೊಂದು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

About The Author

Leave a Reply

Your email address will not be published. Required fields are marked *

You cannot copy content of this page.