March 6, 2026
WhatsApp Image 2023-02-22 at 10.48.03 AM

ವಿಟ್ಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣುಬಿಗಿದು ಅತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರ ಪ್ರಮೋದ್‌ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ‌.

ಪ್ರಮೋದ್ ರವರು ಕಳೆದ ಕೆಲ ತಿಂಗಳುಗಳಿಂದ ಮಾನಸಿಕವಾಗಿ ಖಿನ್ನತೆಯಿಂದ ಬಳಲುತ್ತಿದ್ದು ಮನೆಯಲ್ಲೇ ಇದ್ದರು. ನಿನ್ನೆ ಮಧ್ಯಾಹ್ನ ವೇಳೆ ಮನೆಯ ಕೋಣೆಯಲ್ಲಿ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ತಿಮ್ಮಪ್ಪ ಗೌಡರವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.