![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಬೆಂಗಳೂರು: ಹಿರಿಯ ಚಲನಚಿತ್ರ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಇಂದು ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಮುನಿರತ್ನ, ಡಾ. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿ ಶಾಸಕರಾದ ಅನಂತನಾಗ್, ನಂತರ ಜೆ.ಹೆಚ್.ಪಟೇಲ್ ಅವರ ಮಂತ್ರಿಮಂಡಲದಲ್ಲಿ ಮಂತ್ರಿಯಾಗಿದ್ದರು.
ಶಾಸಕ, ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.