March 13, 2026
n4791821601678510165646bfdca4c35efe52dacc70c29fe04fd9b487c9abbddee3ee1d0a30217dc42a9357-1024x768

ಕಾಪು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಗಾಯಾಳು ವಿದ್ಯಾರ್ಥಿನಿ.

ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಖಾಸಗಿ ಬಸ್ ಅನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.