ಸುಳ್ಯ : ಲಾಡ್ಜ್‌ ನಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರು ಯುವತಿಯರು ಸೇರಿ ಓರ್ವ ಪೊಲೀಸ್ ವಶಕ್ಕೆ

ಸುಳ್ಯ : ವೇಶ್ಯಾವಾಟಿಕೆ ಅಡ್ಡೆ ಮೇಲೆ ಸುಳ್ಯ ಪೊಲೀಸರ ಸಮ್ಮುಖದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಅನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಜತೆಗೂಡಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಇಪ್ಪತ್ತೆರಡರಿಂದ ಇಪ್ಪತ್ತಮೂರು ವಯಸ್ಸಿನ ಇಬ್ಬರು ಯುವತಿಯರು ಹಾಗೂ ಓರ್ವ ರೂಂ ಬಾಯ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದಾಳಿ ವೇಳೆ ಇಬ್ಬರು ಏಜೆಂಟರು ತಲೆ ಮರೆಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಇಬ್ಬರು ಬಂಧಿತರು ಸುಳ್ಯ ಪೊಲೀಸರ ವಶದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಪುತ್ತೂರು, ಕಡಬ ಮೂಲದ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆಗೆ ಯತ್ನ ನಡೆಸಲಾಗುತ್ತಿತ್ತು ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.