ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಗೆ ಅಧಿಕೃತ ಚಾಲನೆ ದೊರೆತಿದೆ. ವಿಧಾನಸೌಧದ ಮುಂಭಾಗ ಸಿಎಂ ಸಿದ್ದರಾಮಯ್ಯ
ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಹಸಿರು ನಿಶಾನೆ ತೋರಿದರು.
ಡಿಸಿಎಂ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಿಎಂಗೆ ಸಾಥ್ ಕೊಟ್ಟರು. ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು ಯೋಜನೆಗೆ
ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಯ ಬಳಿಕ ರಾಜ್ಯಾದ್ಯಂತ ಸಾಮಾನ್ಯ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.