![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ನೋಯ್ಡಾ: ನೊಯ್ಡಾದಲ್ಲಿ ಫ್ಯಾಶನ್ ರನ್ವೇಯಲ್ಲಿ ರಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತರನ್ನು ವಂಶಿಕಾ ಚೋಪ್ರಾ ಎಂದು ಗುರುತಿಸಲಾಗಿದೆ.
ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸುಡಿಯೋದಲ್ಲಿ ಈ ಅಪಘಾತ ಸಂಭವಿಸಿದೆ.
ವೇದಿಕೆ ಮೇಲೆ ಲೈಟ್ಸ್ಗಾಗಿ ಅಳವಡಿಸಲಾಗಿದ್ದ ಕಬ್ಬಿಣದ ಕಂಬವನ್ನು ಅಳವಡಿಸಲಾಗಿತ್ತು. ರಾಂಪ್ ವಾಕ್ ವೇಳೆ ಕಬ್ಬಿಣದ ಕಂಬ ಬಿದ್ದು ಮಾಡೆಲ್ ತಕ್ಷಣವೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಾಬಿ ರಾಜ್ ಎಂಬ ವ್ಯಕ್ತಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ನಂತ್ರ, ಫ್ಯಾಷನ್ ಶೋ ಆಯೋಜಕರು ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಂಶಿಕಾ ಅವರ ಸಾವಿನ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ಫ್ಯಾಷನ್ ಶೋ ಆಯೋಜಕ ಮತ್ತು ಲೈಟಿಂಗ್ ಕಾರ್ಯದಲ್ಲಿ ತೊಡಗಿದ್ದ 4 ಜನರನ್ನು ಬಂಧಿಸಿದ್ದಾರೆ ಎಂದು ನೋಯ್ಡಾದ ಹೆಚ್ಚುವರಿ ಡಿಸಿಪಿ ಮೋಹನ್ ಅವಸ್ತಿ ತಿಳಿಸಿದ್ದಾರೆ.
ಫ್ಯಾಷನ್ ಶೋಗೆ ಯಾವುದೇ ಅನುಮತಿ ನೀಡಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.