ಮಂಗಳೂರು: ವಿಮಾನಕ್ಕೆ ಬಳಕೆಯಾಗುವ ಪೆಟ್ರೋಲ್‌ಗೆ ಕಲಬೆರಕೆ ಪ್ರಕರಣ; ಅಧಿಕಾರಿಗಳಿಂದ ದಾಳಿ

ಮಂಗಳೂರು: ವಿಮಾನಕ್ಕೆ ಬಳಕೆ ಆಗುವ ಪೆಟ್ರೋಲ್‌ಗೆ ಸೀಮೆಎಣ್ಣೆ ರಾಸಾಯನಿಕ ಕಲಬೆರಕೆ ಮಾಡುವ ಪ್ರಕರಣವೊಂದು ಸುರತ್ಕಲ್ ಬಳಿಯ ಬಾಳಾದಲ್ಲಿ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಹಾಗೂ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಎರಡು ಟ್ಯಾಂಕರ್, ಪಿಕ್‌ಅಪ್ ಸಹಿತ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಮಾನಕ್ಕೆ ಬಳಕೆ ಮಾಡುತ್ತಿದ್ದ ದುಬಾರಿ ಬೆಲೆಯ ಪೆಟ್ರೋಲ್ ಸರಬರಾಜು ಆಗುತ್ತಿದ್ದ ಟ್ಯಾಂಕರ್ ನಿಂದ ಪೆಟ್ರೋಲ್ ಕಳ್ಳತನ ಮಾಡಿ ಅದಕ್ಕೆ ಸೀಮೆ ಎಣ್ಣೆ ಕಲಬೆರಕೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ದಾಳಿಯ ಸಂದರ್ಭದಲ್ಲಿ ಗುಪ್ತವಾಗಿ ನಿರ್ಮಿಸಿದ ಅಂಡರ್ ಟ್ಯಾಂಕ್ ಪತ್ತೆಯಾಗಿದೆ. ಎರಡು ಟ್ಯಾಂಕರ್ ಗಳಿಂದ ಪೆಟ್ರೋಲ್ ನ್ನು ಗುಪ್ತವಾಗಿ ನಿರ್ಮಿಸಿದ ಟ್ಯಾಂಕ್ ಗೆ ತುಂಬಿಸಿ ಬಳಿಕ ಟ್ಯಾಂಕರ್ ಗೆ ಸೀಮೆ ಎಣ್ಣೆ ಯನ್ನು ರಾಸಾಯನಿಕ ಮಿಶ್ರಣ ಮಾಡಿ ಕಲಬೆರಕೆ ಮಾಡುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಉಪನಿರ್ದೇಶಕರಾದ ಮಾಣಿಕ್ಯ, ಆಹಾರ ನಿರೀಕ್ಷರಾದ ಕೆ. ಪ್ರಮೋದ್ ಕುಮಾರ್ ಹಾಗೂ ಚರಣ್, ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಪುನೀತ್ ಗಾವಂಕರ್ ನೇತೃತ್ವದ ತಂಡ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Check Also

ಮಣಿಪಾಲ: ಪರೀಕ್ಷೆಯಲ್ಲಿ ಅನುತ್ತೀರ್ಣ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.ಮೃತ ಬಾಲಕನನ್ನು ಕಾಪು …

Leave a Reply

Your email address will not be published. Required fields are marked *

You cannot copy content of this page.