ವೇಣೂರು, ಎ. 19: ವೇಣೂರು ಗ್ರಾ.ಪಂ. ವ್ಯಾಪ್ತಿಯ ಬಜಿರೆ ಗ್ರಾಮದ ಮುದ್ದಾಡಿ-ಸಿದ್ದಕಟ್ಟೆ ರಸ್ತೆಯ ಪಕ್ಕದಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯನ್ನು ವೇಣೂರು ಗ್ರಾ.ಪಂ. ವಿಲೇವಾರಿ ಮಾಡಿಸಿದೆ.
ಮುದ್ದಾಡಿಯ ಜನವಸತಿ ಪ್ರದೇಶದ ರಸ್ತೆ ಬದಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಯಾರೋ ಸುರಿದು ಸ್ವಚ್ಛ ಭಾರತ್ ಪರಿಕಲ್ಪನೆಗೆ ಸವಾಲು ಎಸೆದಿರುವ ಬಗ್ಗೆ ರೂರಲ್‌ನ್ಯೂಸ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು. ಪಂಚಾಯತ್‌ನ ಘನತ್ಯಾಜ್ಯ ವಿಲೇವಾರಿ ಘಟಕದ ಅಣತಿ ದೂರದಲ್ಲೇ ಈ ಪಾಸ್ಟಿಕ್ ತ್ಯಾಜ್ಯದ ರಾಶಿ ಕಂಡು ಬಂದಿತ್ತು. ಇದೀಗ ವರದಿಯ ಬೆನ್ನಲ್ಲೇ ವೇಣೂರು ಗ್ರಾ.ಪಂ. ಆಡಳಿತ ಸೂಕ್ತ ಕ್ರಮ ಕೈಗೊಂಡಿದ್ದು, ಸ್ಥಳೀಯವಾಗಿ ತ್ಯಾಜ್ಯವನ್ನು ರಸ್ತೆ ಬದಿ ಎಸೆಯದಂತೆ ಎಚ್ಚರಿಕೆಯನ್ನೂ ಅಧಿಕಾರಿಗಳು ನೀಡಿದ್ದಾರೆ. ಪಂಚಾಯತ್‌ನ ಕಾರ್ಯವೈಖರಿಗೆ ಗ್ರಾಮಸ್ಥರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.