ದ.ಕ. ಜಿಲ್ಲೆಗೆ ಇಂದು ಸಂಜೆ ಸಾಧಾರಣ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಮೇ 06: ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಧಾರಾಕಾರ ಮಳೆ ದಾಖಲಾಗುತ್ತಿದೆ. ಇದು ಭಾನುವಾರದಿಂದಲೂ ಮುಂದಿನ ನಾಲ್ಕು ದಿನಗಳವರೆಗೂ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.  

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಬಾಗಲಕೋಟೆಗೆ ತುಂತುರು ಮಳೆ ಸಂಭವವಿದೆ. ಉಳಿದೆಡೆ ಸಹಜ ವಾತಾವರಣ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಂಜೆ ಮಳೆ ನಿರೀಕ್ಷೆ 

ಇಂದು ಭಾನುವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದೆ, ಆದರೆ ಇದುವರೆಗೆ ಎಲ್ಲಿಯೂ ಮಳೆ ಬಿದ್ದ ಬಗ್ಗೆ ವರದಿಯಾಗಿಲ್ಲ. ಸಂಜೆ ಇಲ್ಲವೇ ರಾತ್ರಿ ದಿಢೀರ್ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Check Also

ಪೋಷಕರೇ ಎಚ್ಚರ : ಮಕ್ಕಳಿಗೆ ನೀಡುವ ರಸ್ಕ್ ನಿಂದ ಆರೋಗ್ಯ ಸಮಸ್ಯೆಗಳು ಕಾಡಬಹುದು!

ಪೋಷಕರೇ ಮಕ್ಕಳಿಗೆ ನೀವು ನೀಡುವ ರಸ್ಕ್ ಅನಾರೋಗ್ಯಕ್ಕೆ ಕಾರಣವಾಗಬಹುದು. ಅನೇಕ ಜನರು ಚಹಾದ ಜೊತೆಗೆ ರಸ್ಕ್ ಮತ್ತು ಬಿಸ್ಕತ್ತುಗಳನ್ನು ತಿನ್ನುತ್ತಾರೆ. …

Leave a Reply

Your email address will not be published. Required fields are marked *

You cannot copy content of this page.