March 4, 2026
hr

ಬೆಂಗಳೂರು, ಮೇ 30: ಮುಂದಿನ ಎರಡು ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸಂಭವ ಇದೆ. ಹೀಗಾಗಿ ಇಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನಾ ವರದಿಯಲ್ಲಿ ತಿಳಿಸಿದೆ.

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳು ಮುಂದಿನ ನಾಲ್ಕು ದಿನ ಪೈಕಿ ಎರಡು ದಿನ ವೇಗದ ಗಾಳಿ ಸಹಿತ ವ್ಯಾಪಕ ಮಳೆ ದಾಖಲಾತಿಗೆ ಸಾಕ್ಷಿಯಾಗಲಿದ್ದು, ಈ ಸಂಬಂಧ ೧೨ ಜಿಲ್ಲೆಗಳಿಗೆ ಅತ್ಯಧಿಕ ಮಳೆ ಪ್ರಯುಕ್ತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಭೂಮೇಲ್ಮೈ ಸುಳಿಗಾಳಿ, ಸಮುದ್ರಮಟ್ಟದಲ್ಲಿನ ವೈಪರಿತ್ಯಗಳ ಪರಿಣಾಮದಿಂದಾಗಿ ಒಳನಾಡಿನ ಕೆಲವು ಜಿಲ್ಲೆಗಳು ಮತ್ತು ಮಲೆನಾಡಿನ ಹಲವು ಜಿಲ್ಲೆಗಳಿಗೆ ಮಳೆ ಅಬ್ಬರಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.