March 14, 2026
hosangady rotary

ಹೊಸಂಗಡಿ, ಜೂ. 1 : ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿಯ ಸಂದರ್ಭದಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್‌ಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಗ್ರಾಮದ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕಾಗಿ ಧನ ಸಹಾಯವನ್ನು ನೀಡಲಾಯಿತು. ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಕಾಶ್ ಕಾರಂತ್, ಅಸಿಸ್ಟೆಂಟ್ ಗವರ್ನರ್ ಎಲಿಯಾಸ್ ಸ್ಯಾಂಟಿಸ್, ಝೋನಲ್ ಲೆಫ್ಟಿನೆಂಟ್ ರಾಘವೇಂದ್ರ ಭಟ್, ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕರುಣಾಕರ್, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ರೊಟೇರಿಯಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ, ರೋಟರಿ ಸಿದ್ಧಕಟ್ಟೆಯ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಕಾರ್ಯಕ್ರಮ ನಿರ್ವಹಿಸಿದರು.

About The Author

Leave a Reply

Your email address will not be published. Required fields are marked *

You cannot copy content of this page.