March 14, 2026
WhatsApp Image 2023-06-14 at 2.21.13 PM

ವಿಟ್ಲ : ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಬಂಟ್ವಾಳ ತಾಲೂಕು ವೀರಕಂಭ ಮಜಿ ನಿವಾಸಿ ಬಾಲಕೃಷ್ಣ ರವರ ಪುತ್ರಿ ಶ್ರೀದೇವಿ (23) ನಾಪತ್ತೆಯಾಗಿದ್ದ ಯುವತಿ. ಶ್ರೀದೇವಿ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದು, ಜೂ.9 ರಂದು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಎಂಬಲ್ಲಿರುವ ಮನೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಿ ಬರುವುದಾಗಿ ವಿಟ್ಲಕ್ಕೆ ಹೋದವರು ಸಾಯಂಕಾಲವಾದರೂ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಯುವತಿ ಮಂಗಳೂರಿನ ಪಿಜಿಯೊಂದರಲ್ಲಿ ಪತ್ತೆಯಾಗಿದ್ದು, ಪಾಂಡೇಶ್ವರ ಠಾಣೆಗೆ ಹಾಜರಾಗಿರುವುದಾಗಿ ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.