ಬೆಂಗಳೂರು : ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನ ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಇನ್ನು ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ.
ಇನ್ನು ಇನ್ನೊಂದು ಮಹತ್ವದ ನಿರ್ಧಾರ ೆನ್ನುವಂತೆ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.