March 5, 2026
images (4)

ಭಾಗಲ್‌ಪುರ (ಬಿಹಾರ): ಬಿಹಾರದ ಭಾಗಲ್‌ಪುರ ಜಿಲ್ಲೆಯ ಬಾಬರ್‌ಗಂಜ್ ಪ್ರದೇಶದ ಮನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಪೊಲೀಸರ ಪ್ರಕಾರ, ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟದ ಬಗ್ಗೆ ಮಾಹಿತಿ ಪಡೆದ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಆದರೆ, ದುರಂತಕ್ಕೆ ನಿಜಕ್ಕೂ ಸಿಲಿಂಡರ್ ಸ್ಫೋಟ ಕಾರಣವೇ ಎಂಬುದನ್ನು ಅವರು ಖಚಿತಪಡಿಸಿಲ್ಲ. ಈ ಮೂಲಕ ಸ್ಫೋಟದ ಹಿಂದಿನ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಬರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

“ಶನಿವಾರ ಸಂಜೆ ಸಿಲಿಂಡರ್ ಸ್ಫೋಟದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳದಲ್ಲಿವೆ. ಸ್ಫೋಟದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅವಶೇಷಗಳ ತೆರವು ನಡೆಯುತ್ತಿದೆ” ಎಂದು ಆನಂದ್ ಕುಮಾರ್, ಭಾಗಲ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ತಿಳಿಸಿದ್ದಾರೆ.

ಘಟನೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

About The Author

Leave a Reply

Your email address will not be published. Required fields are marked *

You cannot copy content of this page.