March 14, 2026
WhatsApp Image 2023-07-06 at 8.59.15 PM (1)

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಳಕಂಡ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಹಾಗೂ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 7ರಂದು ರಜೆ ಸಾರಲಾಗಿದೆ. ಗ್ರಾಮೀಣ ಪ್ರದೇಶಗಳಿಂದ ಬರುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಅನಾನುಕೂಲವಾಗು ಸಂದರ್ಭದಲ್ಲಿ ಆನ್‌ ಲೈನ್‌ ಮೂಲಕ ತರಗತಿ ನಡೆಸಲು ಸಂಬಂಧ ಪಟ್ಟ ಸಂಸ್ಥೆಗಳು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಉಡುಪಿಯಲ್ಲಿಯೂ ರಜೆ: ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ (ಜುಲೈ 7) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ಧಾರೆ‌. ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ರಜೆ ಘೋಷಣೆ ಮಾಡಲಾಗಿದೆ‌.

About The Author

Leave a Reply

Your email address will not be published. Required fields are marked *

You cannot copy content of this page.